ದುಬೈಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಪ್ರಯಾಣಿಕನಿಗೆ ಹೃದಯಾಘಾತ: ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ

ಹೊಸದಿಗಂತ ಡಿಜಿಟಲ್‌ಡೆಸ್ಕ್:‌

ಅಹ್ಮದಾಬಾದ್ ನಿಂದ ದುಬೈಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ವ್ಯಕ್ತಿಯೊಬ್ಬರಿಗೆ ಹೃದಯಘಾತ ವೈದ್ಯಕೀಸಂಭವಿಸಿದ್ದು, ಈ ಹಿನ್ನೆಲೆ ತುರ್ತು ಪರಿಸ್ಥಿತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವನ್ನು ಕರಾಚಿಗೆ ತಿರುಗಿಸಲಾಗಿದೆ.

ಮಂಗಳವಾರ ರಾತ್ರಿ ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಗೆ ಹೃದಯಘಾತ ಕಾಣಿಸಿಕೊಂಡಿದೆ.ಮಾನವೀಯತೆ ಮೇರೆಗೆ ವಿಮಾನವನ್ನು ಇಳಿಯಲು ಅನುಮತಿ ನೀಡಲಾಯಿತು ಎಂದು ತಿಳಿದು ಬಂದಿದೆ.

ಎಸ್ಜಿ -15 ವಿಮಾನವು ರಾತ್ರಿ 9: 30 ರ ಸುಮಾರಿಗೆ ಕರಾಚಿಯಲ್ಲಿ ಇಳಿಯಿತು ಮತ್ತು ಪ್ರಯಾಣಿಕರಿಗೆ ವೈದ್ಯಕೀಯ ನೆರವು ನೀಡಲಾಯಿತು ಎಂದು ಸ್ಪೈಸ್ ಜೆಟ್ ಅಧಿಕಾರಿಗಳು ಬಹಿರಂಗಪಡಿಸಿದರು.

ಬೋಯಿಂಗ್ 737 ವಿಮಾನವು ಅಹಮದಾಬಾದ್ ನಿಂದ ದುಬೈಗೆ ತೆರಳುತ್ತಿದ್ದಾಗ 27 ವರ್ಷದ ಪ್ರಯಾಣಿಕ ಧರ್ವಾಲ್ ಧರ್ಮೇಶ್ ಅವರಿಗೆ ಹೃದಯಾಘಾತವಾಗಿದೆ ಮತ್ತು ಅವರಿಗೆ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದ” ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರದ (ಸಿಎಎ) ವಕ್ತಾರರು ತಿಳಿಸಿದ್ದಾರೆ.

ಸಿಎಎಯ ವೈದ್ಯಕೀಯ ತಂಡವು ಸಕ್ಕರೆ ಮಟ್ಟ ಕುಸಿದ ಮತ್ತು ಹೃದಯ ಬಡಿತವನ್ನು ಅನುಭವಿಸುತ್ತಿರುವ ಪ್ರಯಾಣಿಕರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಿದೆ ಎಂದು ಅವರು ಹೇಳಿದರು.

ಅಹಮದಾಬಾದ್ನಿಂದ ದುಬೈಗೆ ಹಾರುತ್ತಿದ್ದ ಸ್ಪೈಸ್ ಜೆಟ್ ವಿಮಾನವನ್ನು ಕರಾಚಿಗೆ ತಿರುಗಿಸಲಾಗಿದೆ ಎಂದು ಮಂಗಳವಾರ ರಾತ್ರಿ ದೆಹಲಿಯ ವಿಮಾನಯಾನ ವಕ್ತಾರರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!