ಜಿಲ್ಲಾಧಿಕಾರಿ ಕಚೇರಿಗೆ ದಾಖಲೆಗಳ ಮಾಲೆ ಹಾಕಿಕೊಂಡು ಉರುಳಿಕೊಂಡೇ ಬಂದ ವ್ಯಕ್ತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭ್ರಷ್ಟಾಚಾರ ಆರೋಪದಡಿ ಗ್ರಾಮದ ಸರಪಂಚ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಧ್ಯಪ್ರದೇಶದ ನೀಮಚ್‌ನಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ವ್ಯಕ್ತಿಯೊಬ್ಬರು ದಾಖಲೆಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡು ರಸ್ತೆಯಲ್ಲಿ ಉರುಳಾಡಿಕೊಂಡು ಬಂದ ಘಟನೆ ನಡೆದಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಜುಲೈ ನಂತರ ಈ ರೀತಿ ಮಧ್ಯ ಪ್ರದೇಶದಲ್ಲಿ ನಡೆಯುತ್ತಿರುವ ಎರಡನೇ ಪ್ರತಿಭಟನೆಯಾಗಿದೆ. ನೀಮಚ್ ಜಿಲ್ಲಾಧಿಕಾರಿ ಹಿಮಾಂಶು ಚಂದ್ರ ಆ ವ್ಯಕ್ತಿಯ ದೂರಿನ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ವಿಡಿಯೋವನ್ನು ಕಾಂಗ್ರೆಸ್‌ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

 

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!