Monday, September 25, 2023

Latest Posts

ತೀವ್ರ ಅನಾರೋಗ್ಯದಿಂದ ಬೇಸತ್ತು ಪ್ರಾಣ ಬಿಟ್ಟ ವ್ಯಕ್ತಿ!

ಹೊಸದಿಗಂತ ಡಿಟಿಟಲ್‌ ಡೆಸ್ಕ್:

ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೊಬ್ಬ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಘೋರ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಹುಣಸನಹಳ್ಳಿ ಬಳಿ ನಡೆದಿದೆ.

ಮೃತ ವ್ಯಕ್ತಿ ಮುನಿರಾಜು (56) ಎಂದು ಗುರುತಿಸಲಾಗಿದೆ . ಮುನಿರಾಜು ಕಳೆದ ಹಲವು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಡಯಾಲಸಿಸ್ ನಲ್ಲಿದ್ದರು.

ಇತ್ತೀಚೆಗೆ ತೀವ್ರ ಅನಾರೋಗ್ಯ ಸಮಸ್ಯೆ ಎದುರಾಗಿತ್ತು. ಇದರಿಂದಾಗಿ ಮನನೊಂದು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಂಗಾರಪೇಟೆ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!