ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆರೆಯ ರಾಜ್ಯಗಳಲ್ಲಿ ಕೋವಿಡ್ ರೂಪಾಂತರಿ ಜೆಎನ್೧ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿವೆ. ಇದೀಗ ಮಂಡ್ಯದ ಮದ್ದೂರಿನಲ್ಲಿ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಶಸ್ತ್ರಚಿಕಿತ್ಸೆಗೆಂದು ವ್ಯಕ್ತಿ ತಾಲೂಕು ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಕೊರೋನಾ ಪರೀಕ್ಷೆ ಮಾಡಿಸಿದಾಗ ಅವರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ವ್ಯಕ್ತಿಗೆ ಯಾವುದೇ ಲಕ್ಷಣಗಳಿಲ್ಲ, ಟ್ರಾವೆಲ್ ಇತಿಹಾಸವೂ ಇಲ್ಲ ಎಂದು ತಿಳಿದುಬಂದಿದೆ.
ವ್ಯಕ್ತಿಯನ್ನು ಕ್ವಾರೆಂಟೀನ್ ಮಾಡಿದ್ದು, ಅವರ ಕುಟುಂಬದವರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ ಯಾರಿಗೂ ಕೊರೋನಾ ಇರುವುದು ದೃಢಪಟ್ಟಿಲ್ಲ. ಇದು ಜೆಎನ್1 ರೂಪಾಂತರಿಯೋ ಇಲ್ಲವೋ ಎನ್ನುವ ಪರೀಕ್ಷೆ ಅಗತ್ಯವಿಲ್ಲ ಎಂದು ಸಿಬ್ಬಂದಿ ಹೇಳಿದ್ದಾರೆ. ಕೋವಿಡ್ ಪಾಸಿಟಿವ್ ವ್ಯಕ್ತಿಗೆ ಸಿಟಿ ಸ್ಕ್ಯಾನ್ ಮಾಡಿಸಲಾಗಿದೆ. ಅವರು ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ. ಮೋಹನ್ ಹೇಳಿದ್ದಾರೆ.