spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 27, 2022

Latest Posts

ಅಪಘಾತದಲ್ಲಿ ವ್ಯಕ್ತಿಯ ಮೆದುಳು ನಿಷ್ಕ್ರಿಯ:ಅಂಗಾಂಗ ದಾನ ಮಾಡಿ 8 ಜನರ ಬದುಕಿಗೆ ಬೆಳಕಾದ ಕುಟುಂಬ

ಹೊಸದಿಗಂತ ವರದಿ ರಾಮನಗರ:

ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕುಟುಂಬಸ್ಥರು 8 ಮಂದಿಗೆ ಬದುಕು ನೀಡಿದ್ದಾರೆ.
ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಚಂದ್ರಶೇಖರ್​ ಎಂಬುವವರಿಗೆ ಅಪಘಾತವಾಗಿತ್ತು. ತಲೆಯ ಹಿಂಭಾಗಕ್ಕೆ ತೀವ್ರ ಪೆಟ್ಟು ಬಿದ್ದಿತ್ತು. ತಕ್ಷಣವೇ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸತತ 48 ಗಂಟೆಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಂದ್ರಶೇಖರ್​ ಚಿಕಿತ್ಸೆಗೆ ಸ್ಪಂದಿಸದಿದ್ದಾಗ, ವೈದ್ಯರು ಬ್ರೈನ್​ ಡೆಡ್ ​ಎಂದು ಘೋಷಿಸಿದ್ದರು. ಚಂದ್ರಶೇಖರ್​ ಬದುಕಿ ಬರಲ್ಲ ಎಂಬ ಕಹಿ ಸತ್ಯ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ನೋವಿನಲ್ಲೂ ಮಾನವೀಯತೆ ಮರೆದ ಕುಟುಂಬ, ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿತು.
ಹೃದಯ, ಎರಡು ಕಣ್ಣು, ಕಿಡ್ನಿ, ಯಕೃತ್​ ಅನ್ನು ದಾನವಾಗಿ ನೀಡಿದ್ದಾರೆ. ಆ ಮೂಲಕ 8 ಮಂದಿಯ ಬದುಕಿಗೆ ಬೆಳಕಾಗಿದ್ದಾರೆ. ಮೃತ ಚಂದ್ರಶೇಖರ್​ ಖಾಸಗಿ ಕಂಪನಿಯಲ್ಲಿ ಫೀಲ್ಡ್​ ಟೆಕ್ನಿಷಿಯನ್​ ಆಗಿ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದು, ಪತ್ನಿ ನಾಲ್ಕು ತಿಂಗಳ ಗರ್ಭಿಣಿ. ಚಂದ್ರಶೇಖರ್​ ಅಂತ್ಯಕ್ರಿಯೆ ಬಿಡದಿಯಲ್ಲಿ ನೆರವೇರಿತು. ಸಾವಿನಲ್ಲೂ ಸಾರ್ಥಕತೆ ಮೆರೆದ ಚಂದ್ರಶೇಖರ್​ಗೆ ನೂರಾರು ಮಂದಿ ಕಣ್ಣೀರ ವಿದಾಯ ಹೇಳಿದರು.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap