ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಇದೀಗ ಸರಕಾರಕ್ಕೆ ಪತನದ ಭೀತಿ ಶುರುವಾಗಿದೆ.
ಈ ಕುರಿತು ಖುದ್ದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೊಂಡಿದ್ದು, ವಿದೇಶದಲ್ಲಿ ಕುಳಿತು ಕರ್ನಾಟಕದಲ್ಲಿ ಬಹುಮತದ ಕಾಂಗ್ರೆಸ್ ಸರ್ಕಾರವನ್ನು(karnataka congress government ) ಬೀಳಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಹೊಸ ಬಾಂಬ್ ಸಿಡಿಸಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ. ನಮಗೆ ಬಂದ ಮಾಹಿತಿ ಪ್ರಕಾರ ತಂತ್ರ ಮಾಡುತ್ತಿದ್ದಾರೆ ಎಂದು ಹೆಸರು ಹೇಳದೇ ಪರೋಕ್ಷವಾಗಿ ಆರೋಪ ಮಾಡಿದರು.
ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ. ಇದೆಲ್ಲಾ ಒಂದು ತಂತ್ರ. ಇದರ ಬಗ್ಗೆ ನಮಗೂ ಮಾಹಿತಿ ಬಂದಿದೆ.
ಬೆಂಗಳೂರಿನಲ್ಲಿ ಆಪರೇಷನ್ ಮಾಡಿದ್ರೆ ಗೊತ್ತಾಗುತ್ತೆ ಎಂದು ಸಿಂಗಾಪುರದಲ್ಲಿ ಕೂತು ಆಪರೇಷನ್ ಮಾಡುತ್ತಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು.