BREAKING NEWS | ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ72 ಪ್ರಯಾಣಿಕರಿದ್ದ ವಿಮಾನ ಪತನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ 72 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ಏರ್‌ಲೈನ್ಸ್ ನಿರ್ವಹಿಸುತ್ತಿದ್ದ ವಿಮಾನ ಇದಾಗಿದ್ದು, ಕಸ್ಕಿ ಜಿಲ್ಲೆಯ ಪೋಖರಾದಲ್ಲಿ ಭಾನುವಾರ ಪತನಗೊಂಡಿದೆ. ಎಟಿಆರ್-72  ವಿಮಾನವು ಪತನಗೊಂಡಿದ್ದು, ಕನಿಷ್ಠ 13 ಮಂದಿ ಮೃತಪಟ್ಟಿರುವ ಬಗ್ಗೆ ಮಾಹಿತಿ ದೊರಕಿದೆ.

ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯ ಮುಂದುವರಿದಿದ್ದು, ವಿಮಾನದಲ್ಲಿ 68 ಪ್ರಯಾಣಿಕರು ಹಾಗೂ 4 ಸಿಬ್ಬಂದಿ ಇದ್ದರು. ಸ್ಥಳದಲ್ಲಿ 13 ಮೃತದೇಹಗಳು ಕಂಡುಬಂದಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!