ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಟೇಕ್‌ಆಫ್ ಆದ ಕೆಲವೇ ನಿಮಿಷದಲ್ಲಿ ವಿಮಾನವೊಂದು ಪತನಗೊಂಡಿದ್ದು, ಓರ್ವ ಮೃತಪಟ್ಟಿದ್ದಾರೆ.
ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಗಲ್ ಇಂಜಿನ್ ವಿಮಾನ ಇದಾಗಿದ್ದು, ನಾಲ್ಕು ಜನರು ಇದರಲ್ಲಿ ಪ್ರಯಾಣ ಮಾಡುತ್ತಿದ್ದರು. ಮುರ್ರಿಯೆಟಾದ ಫ್ರೆಂಚ್ ವ್ಯಾಲಿ ವಿಮಾನ ನಿಲ್ದಾಣದ ಬಳಿ ಅಪಘಾತ ವಾಗಿದ್ದು, ಟೇಕ್‌ಆಫ್ ಆದ ತಕ್ಷಣವೇ ವಿಮಾನ ಪತನವಾಗಿದೆ.