April 13, 2026
Monday, April 13, 2026
spot_img

ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಹಠಾತ್ ತಾಂತ್ರಿಕ ಸಮಸ್ಯೆ: ಐರ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಐರ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶ ನಡೆಸಿದೆ.

ಭಾನುವಾರ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಆರಂಭಿಸಿದ್ದ ಏರ್ ಇಂಡಿಯಾ AI102 ಸಂಖ್ಯೆಯ ವಿಮಾನದಲ್ಲಿ ಧಿಡೀರ್ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ತಕ್ಷಣವೇ ಪೈಲೆಟ್ ಐರ್ಲೆಂಡ್‌ನ ಶಾನನ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ನಡೆಸಿದ್ದರು. ವಿಮಾನದಲ್ಲಿದ್ದ ಪ್ರಯಾಣಿಕರು ಎಲ್ಲರು ಸುರಕ್ಷಿತಾಗಿದ್ದಾರೆ, ಘಟನೆ ಹಿಂದಿನ ಕಾರಣ ಪತ್ತೆಗೆ ತನಿಖೆ ನಡೆಸಲಾಗುತ್ತದೆ ಎಂದು ಏರ್ ಇಂಡಿಯಾ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !