ಕ್ಯಾನ್ಸರ್​ಗೆ ಬಲಿಯಾದ ಪೊಲೀಸ್ ಇನ್ಸ್​ಪೆಕ್ಟರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಧಾನಸೌಧ ಸೆಕ್ಯೂರಿಟಿ ಕರ್ತವ್ಯದಲ್ಲಿದ್ದ ಇನ್ಸ್​ಪೆಕ್ಟರ್ ಧನಂಜಯ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇನ್ಸ್​ಪೆಕ್ಟರ್ ಧನಂಜಯ್ ಕಳೆದ ಒಂದು ವರ್ಷದಿಂದ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯುತ್ತಿದ್ದರು.2010ರ ಬ್ಯಾಚ್ ಸಬ್ ಇನ್​​ಸ್ಪೆಕ್ಟರ್ ನೇಮಕಾತಿಯಲ್ಲಿ ಆಯ್ಕೆಯಾಗಿದ್ದ ಧನಂಜಯ್​, ಆರು ತಿಂಗಳ ಹಿಂದಷ್ಟೇ ಇನ್​ಸ್ಪೆಕ್ಟರ್ ಆಗಿ ಬಡ್ತಿ ಹೊಂದಿದ್ದರು.
ಹಲಸೂರುಗೇಟ್, ಇಂದಿರಾನಗರ ಠಾಣೆಗಳಲ್ಲಿ ಸಬ್ ಇನ್​ಸ್ಪೆಕ್ಟರ್​ ಆಗಿ ಕೆಲಸ ನಿರ್ವಹಿಸಿದ್ದರು.

ಕ್ಯಾನ್ಸರ್​ಪೀಡಿತರಾದ್ದರಿಂದ ಕಳೆದ ಕೆಲ ತಿಂಗಳುಗಳಿಂದ ರಜೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಅದಾಗ್ಯೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!