ಹೊಸದಿಗಂತ ಡಿಜಿಟಲ್ ಡೆಸ್ಕ್:
ಏ.28 ರಿಂದ ಪ್ರಧಾನಿ ಮೋದಿ ಒಂದು ವಾರ ರಾಜ್ಯ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ. ಬಿಜೆಪಿ ರಾಜ್ಯಾದ್ಯಂತ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಏ.28 ರಿಂದ ಮೇ.7 ರವರೆಗೆ ಪ್ರಧಾನಿ ಮೋದಿ ರಾಜ್ಯದಲ್ಲಿ ಸಾಕಷ್ಟು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಸುಮಾರು 20ಕ್ಕೂ ಹೆಚ್ಚು ಸಭೆ, ಸಮಾರಂಭಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದು, ಪ್ರಧಾನಿ ಮೊದಲ ಸಭೆ ಎಲ್ಲಿಂದ ಆರಂಭವಾಗಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿದೆ. ಇನ್ನೆರಡು ದಿನದಲ್ಲಿ ಮೊದಲ ಕಾರ್ಯಕ್ರಮದ ಮಾಹಿತಿ ದೊರೆಯಲಿದೆ.
ಪ್ರಧಾನಿ ಮೋದಿ ಜೊತೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮೊದಲಾದವರು ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.