ACCIDENT | ಚಿಕ್ಕಬಳ್ಳಾಪುರದ ಬಳಿ ಮರಕ್ಕೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಗ್ರಾಮದ ಬಳಿ ಪ್ರಯಾಣಿಕರಿದ್ದ ಖಾಸಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಸ್ಥಳದಲ್ಲೇ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬಸ್ ಅತಿಯಾದ ವೇಗದಲ್ಲಿತ್ತು ಮರಕ್ಕೆ ಡಿಕ್ಕಿಯಾದ ರಭಸಕ್ಕೆ ಮರವೇ ಉರುಳಿ ಬಿದ್ದಿತ್ತು. ಎಡಬದಿ ಕುಳಿತ ಪ್ರಯಾಣಿಕರಿಗೆ ಹೆಚ್ಚು ಹಾನಿಯಾಗಿದೆ ಎಂದು ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾತಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!