ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಭಾರತದ ಪ್ರಮುಖ ಉದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮುಕೇಶ್ ಅಂಬಾನಿ ಟಾಪ್-10 ಸ್ಥಾನದಿಂದ ಹೊರಗುಳಿದಿದ್ದಾರೆ. ಹುರುನ್ ಗ್ಲೋಬಲ್ ರಿಚ್ ಲಿಸ್ಟ್ 2025ರ ಪ್ರಕಾರ ಅಂಬಾನಿ ಈ ವರ್ಷ 11ನೇ ಸ್ಥಾನಕ್ಕೆ ತಲುಪಿದ್ದಾರೆ.
ಮುಕೇಶ್ ಅಂಬಾನಿ ಅವರ ಸಂಪತ್ತಿನ ಮೌಲ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಸ್ವಲ್ಪ ಕಡಿಮೆಯಾಗಿದೆ. ಆದಾಗ್ಯೂ, ಅವರ ಒಟ್ಟಾರೆ ಸಂಪತ್ತು ಇನ್ನೂ ಅಪಾರವಾಗಿದ್ದು, ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಪ್ರಾಬಲ್ಯ ಕಾಯ್ದುಕೊಂಡಿದ್ದಾರೆ.
ಈ ವರ್ಷದ ಹುರುನ್ ಗ್ಲೋಬಲ್ ರಿಚ್ ಲಿಸ್ಟ್‌ನಲ್ಲಿ ಎಲಾನ್ ಮಸ್ಕ್, ಜೆಫ್ ಬೆಜೋಸ್, ಮತ್ತು ಮಾರ್ಕ್ ಝುಕರ್‌ಬರ್ಗ್ ರಂತಹ ದಿಗ್ಗಜರು ಮೊದಲ ಕೆಲವು ಸ್ಥಾನಗಳನ್ನು ವಶಪಡಿಸಿಕೊಂಡಿದ್ದಾರೆ.
ಇದರ ಜೊತೆಗೆ, ಚೀನಾದ ಕೆಲವು ಉದ್ಯಮಿಗಳು ತಮ್ಮ ತಂತ್ರಜ್ಞಾನ ಮತ್ತು ಉತ್ಪಾದನಾ ಕಂಪನಿಗಳ ಮೂಲಕ ತಮ್ಮ ಸ್ಥಾನ ಗಟ್ಟಿಗೊಳಿಸಿದ್ದಾರೆ. ಅಂಬಾನಿ ಟಾಪ್-10 ರಿಂದ ಹೊರಗುಳಿದರೂ, ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ ಉನ್ನತ ಸ್ಥಾನ ಉಳಿಸಿಕೊಂಡಿದ್ದಾರೆ.