ಸರ್ಕಾರಿ ಹಾಸ್ಟೆಲ್‌ನಲ್ಲೇ ಪಿಯುಸಿ ವಿದ್ಯಾರ್ಥಿನಿಗೆ ಹೆರಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರಿನ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನಲ್ಲಿ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ.

ಈ ಬಗ್ಗೆ ಹಾಸ್ಟೆಲ್ ವಾರ್ಡನ್ ಹಾಗೂ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಸಂಘಟನೆಗಳು ಒತ್ತಾಯಿಸಿವೆ. ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಈ ಹಾಸ್ಟೆಲ್‌ನಲ್ಲಿ ಇದ್ದಾರೆ.

ಬಾಲಕಿ ತನ್ನ ಹೊಟ್ಟೆ ಸುತ್ತ ಬಟ್ಟೆಯನ್ನು ಸುತ್ತಿದ್ದು, ಆಕೆ ಗರ್ಭಿಣಿ ಎನ್ನುವುದೇ ಗೊತ್ತಿಲ್ಲ ಎಂದು ಸಮಾಜ ಕಲ್ಯಾಣ ಅಧಿಕಾರಿ ಹೇಳಿದ್ದಾರೆ. ಪ್ರತಿ ಮೂರು ತಿಂಗಳಿಗೊಮ್ಮೆ ಹೆಣ್ಣುಮಕ್ಕಳ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಬೇಕು. ಈ ನಿಯಮ ಪಾಲಿಸಿದ್ದರೆ ಮುನ್ನವೇ ವಿಷಯ ಬೆಳಕಿಗೆ ಬರುತ್ತಿತ್ತು ಇದರ ಹೊರತಾಗಿ ಹಾಸ್ಟೆಲ್‌ನಲ್ಲಿ ಹೆರಿಗೆಗೆ ಅವಕಾಶ ನೀಡಲಾಗಿದೆ ಎಂದು ಕಾರ್ಯಕರ್ತರು, ಪೋಷಕರು ಪ್ರಶ್ನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!