ಸಮುದಾಯಕ್ಕೆ 2ಎ ಮೀಸಲಾತಿ; ಡಿ.10 ರಂದು ಸುವರ್ಣಸೌಧದ ಹೊರಗೆ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ‘2ಎ’ ಮೀಸಲಾತಿ ನೀಡಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸದ ಕಾರಣ ಡಿ.10 ರಂದು ಬೆಳಗಾವಿಯ ಸುವರ್ಣಸೌಧದ ಹೊರಗೆ ಪ್ರತಿಭಟನೆ ನಡೆಸಲಾಗುವುದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುವರ್ಣಸೌಧದ ಎದುರು ಲಕ್ಷಾಂತರ ಪಂಚಮಸಾಲಿಗಳು ಅನೇಕ ವಕೀಲರ ನೇತೃತ್ವದಲ್ಲಿ ಜಮಾಯಿಸಿ ಸಮುದಾಯದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಸರ್ಕಾರವನ್ನು ಒತ್ತಾಯಿಸಲಿದ್ದಾರೆಂದು ಹೇಳಿದರು.

ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿಗಳು 2013ರಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ವರ್ಷಗಳಿಂದ ಪಂಚಮಸಾಲಿಗಳು ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಸಮುದಾಯದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇತ್ತೀಚೆಗೆ ಪಂಚಮಸಾಲಿ ಮುಖಂಡರ ಜೊತೆ ಸಿದ್ದರಾಮಯ್ಯ ಚರ್ಚಿಸಿದರೂ ಅವರ ಮನವಿಗೆ ಸ್ಪಂದಿಸಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಪಂಚಮಸಾಲಿಗಳು ಪ್ರಮುಖ ಪಾತ್ರ ವಹಿಸಿದ್ದರು ಎಂದು ತಿಳಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!