ಒಂದು ರಾಷ್ಟ್ರ, ಒಂದು ಚುನಾವಣೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕ ವಿಧಾನಸಭೆಯು ಮುಂಬರುವ “ಒಂದು ರಾಷ್ಟ್ರ, ಒಂದು ಚುನಾವಣೆ” ಪ್ರಸ್ತಾವನೆ ಮತ್ತು ಲೋಕಸಭೆ ಹಾಗೂ ವಿಧಾನಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯ ವಿರುದ್ಧ ನಿರ್ಣಯಗಳನ್ನು ಗುರುವಾರ ಅಂಗೀಕರಿಸಿದೆ.

2026ರ ಜನಗಣತಿ ಅಥವಾ ಅದರ ನಂತರ ನಡೆಯುವ ಜನಗಣತಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಕ್ಷೇತ್ರಗಳ ವಿಂಗಡಣೆಯನ್ನು ನಡೆಸಬಾರದು ಎಂದು ಕರ್ನಾಟಕ ವಿಧಾನಸಭೆ ಒತ್ತಾಯಿಸಿದೆ. ಜನಸಂಖ್ಯೆಯ ಆಧಾರದ ಮೇಲೆ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ ಅದನ್ನು ಗಣನೆಗೆ ತೆಗೆದುಕೊಳ್ಳಬೇಕು.

ಪ್ರತೀ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನಾಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ.

ಎರಡನೇ ನಿರ್ಣಯದಲ್ಲಿ, ಭಾರತವು ವಿಶ್ವದ ಅತಿದೊಡ್ಡ ಒಕ್ಕೂಟ ಪ್ರಜಾಪುಭುತ್ವವಾಗಿದೆ. ಭಾರತ ಸಂವಿಧಾನದ ಭಾಗ ಆಗಿರಲಿ ಎಂದು ಪ್ರತಿಪಾದಿಸಿರುವ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಯ ತತ್ವವು ಈ ಪ್ರಜಾಪ್ರಭುತ್ವದ ಆತ್ಮವಾಗಿದೆ.ʼಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವವು ಭಾರತದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!