ಇನ್ನೂ ಅನುಷ್ಠಾನಕ್ಕೆ ಸಿಗದ ಸ್ಪಂದನೆ: ಡಿ.​ 13ರಂದು ಪಂಚಮಸಾಲಿ ಸಮಾಜದಿಂದ ಬೃಹತ್ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರಮೀನಾಮೇಷ ಎಣಿಸುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್​ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಹಿಂದಿನ ಸರ್ಕಾರ ನಮಗೆ 2ಡಿ ಮೀಸಲಾತಿ ಘೋಷಣೆ ಮಾಡಲಾಗಿತ್ತು. ಅದಿನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಜೊತೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಮಾಜದ ಮುಖಂಡರ ಸಭೆ ಕರೆದು ತೀರ್ಮಾನ ಮಾಡುತ್ತೇವೆ ಎಂದು ಮಾತು ಕೊಟ್ಟು ತಪ್ಪಿದ್ದಾರೆ. ಈ ಸಂಬಂಧ ಸರ್ಕಾರವನ್ನು ಎಚ್ಚರಿಸಲು ಡಿಸೆಂಬರ್​ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೋಸ್ಕರ ಹಿಂದೆ ವಿಧಾನಸೌಧದ ಮುಂದೆಯೇ ಹೋರಾಟ ಮಾಡಬೇಕು ಎಂದು ತೀರ್ಮಾನಿಸಿದ್ದೆವು. ಸಮಾಜದ ಸಭೆಯಲ್ಲಿ ಮೀಸಲಾತಿ ಹೋರಾಟದ ಬಗ್ಗೆ ಚರ್ಚೆ ಮಾಡಿದ್ದೆವು. ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಗಿತ್ತು. ಆದಷ್ಟು ಬೇಗನೆ ಸಿಎಂ ಪಂಚಮಸಾಲಿ ಮುಖಂಡರು ಒಳಗೊಂಡು ಬೆಂಗಳೂರಿನಲ್ಲಿ ಸಭೆ ಮಾಡುವುದಾಗಿ ಭರವಸೆ ನೀಡಿದ್ದರು. ಅವತ್ತಿನಿಂದ ಇವತ್ತಿನವರೆಗೂ ನಮ್ಮ ಮನವಿಗೆ ಸಿಎಂ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ ಎಂದು ಆರೋಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!