ದಿಗಂತ ವರದಿ ಹಾಸನ :
ನಾಪತ್ತೆಯಾಗಿದ್ದ ನಿವೃತ್ತ ಬ್ಯಾಂಕ್ ನೌಕರ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ.
ಮಂಜುನಾಥ್ (70) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ವ್ಯಕ್ತಿ. ಮಂಜುನಾಥ್ ಅರಸೀಕೆರೆ ನಗರದ ಲಕ್ಷ್ಮಿಪುರ ಬಡಾವಣೆಯ ನಿವಾಸಿ. ಮಾ.27 ರಂದು ಸಂಜೆ ವಾಕಿಂಗ್‌ಗೆ ತೆರಳಿದ್ದ ಮಂಜುನಾಥ್ ರಾತ್ರಿಯಾದರೂ ಮನೆಗೆ ವಾಪಸ್ ಆಗಿಲ್ಲ. ಮಾ.28 ರಂದು ಅರಸೀಕೆರೆ ನಗರ ಪೊಲೀಸ್ ಠಾಣೆಗೆಮಂಜುನಾಥ್ ಪತ್ನಿ ಸರೋಜಾ ನಿಂಬಣ್ಣ ಅವರು ಮಿಸ್ಸಿಂಗ್ ದೂರು ನೀಡಿದ್ದರು.
ಇಂದು ಮಂಗಳವಾರ ಕಂತೇನಹಳ್ಳಿ ಕೆರೆಯ ಪಕ್ಕದ ಪಾರ್ಕ್‌ನ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಜುನಾಥ್ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.