ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಲ್ಲೆಯ ಹೊರವಯದ ಪುತ್ತೂರು ನಗರದ ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80) ಎಂಬವರು ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ನಿವೃತ್ತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಭಟ್ ಅವರು ಪುತ್ತೂರು ಸಂಪ್ಯದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಗರ್ಭಿಣಿಯೊಬ್ವರನ್ನು ತಿಂಗಳ ಪರೀಕ್ಷೆಗೆಂದು ಕರೆದುಕೊಂಡು ಬರುತ್ತಿದ್ದ ಆಟೋ ರಿಕ್ಷಾವೊಂದು ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಸೂರ್ಯನಾರಾಯಣ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಮತ್ತೊಂದು ರಿಕ್ಷಾದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಪುತ್ತೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.