ಹಿಜಾಬ್ ವಿವಾದ: ಮಾಜಿ ನ್ಯಾಯಾಧೀಶರು, ವಕೀಲರು ಸೇರಿದಂತೆ 700ಕ್ಕೂ ಹೆಚ್ಚು ಮಂದಿಯಿಂದ ಬಹಿರಂಗ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಹಿಂದುಗಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್. ದ್ವಾರಕಾನಾಥ್, ಹೈಕೋರ್ಟ್‌ನ ಇಬ್ಬರು ಮಾಜಿ ನ್ಯಾಯಾಧೀಶರು ಸೇರಿದಂತೆ ಒಟ್ಟಾರೆ 700ಕ್ಕೂ ಅಧಿಕ ಮಂದಿ ಸಂಬಂಧಪಟ್ಟವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.ಇದರಲ್ಲಿ 500 ಮಂದಿ ವಕೀಲರೂ ಇದ್ದಾರೆ.

ರಾಜ್ಯದಲ್ಲಿ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದ್ದು, ಸಮವಸ್ತ್ರ ಧರಿಸುವಂತೆ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪತ್ರ ಬರೆದಿದ್ದು, ಹೈಕೋರ್ಟ್‌ನ ಮಧ್ಯಂತರ ಆದೇಶ ಕಳವಳ ತರುವಂತಿದೆ. ಮುಸ್ಲಿಂ ಮಹಿಳೆಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದಿರುವುದು ಸಾರ್ವಜನಿಕವಾಗಿ ಅವರನ್ನು ಅವಮಾನಿಸಿದಂತೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಹಾಕಿ ಬಂದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿರುವ ಸಾಕಷ್ಟು ಪ್ರಕರಣಗಳು ಕಣ್ಣೆದುರಿಗಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ ಎಂದು ಹೇಳಿದ್ದಾರೆ. ವಿದ್ಯಾರ್ಥಿನಿಯರಿಗೆ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶಿಕ್ಷಕರು ಹಾಗೂ ಆಡಳಿತ ಮಂಡಳಿಯವರು ಹಿಜಾಬ್ ತೆಗೆಯುವಂತೆ ಒತ್ತಾಯಿಸಿದ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ. ಇದು ಉತ್ತಮ ಬೆಳವಣಿಗೆ ಅಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!