ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕ್ರಾಂತಿ ಯಾವಾಗ ಬೇಕಾದರೂ ಆಗಬಹುದು ಎಂದು ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆಯ ವಿಚಾರ ಕುರಿತು ಮಾಧ್ಯಮಗಳ ಮುಂದೆ ಮಾತನಾಡಲ್ಲ. 5 ವರ್ಷ ಸುಭದ್ರ ಸರ್ಕಾರ ಕೊಡಬೇಕಾದದ್ದು ನಮ್ಮ ಜವಾಬ್ದಾರಿಯಾಗಿದೆ. ಆದ್ರೆ ಯಾರಿಗೂ ಅಧಿಕಾರ ಶಾಶ್ವತ ಅಲ್ಲ ಎಂದು ತಿಳಿಸಿದರು.
ನಾನು ನೂರು ವರ್ಷಗಳ ಕಾಲ ಬದುಕಬೇಕು ಅಂದುಕೊಂಡರು ನನ್ನಿಂದ ಅದು ಸಾಧ್ಯಾನಾ ಅಂತ ಯೋಚಿಸಬೇಕು. ಮಾರನೆಯ ದಿನ ಬೆಳಗಿನ ಆಗುತ್ತೋ ಇಲ್ವೋ ಗೊತ್ತಿಲ್ಲ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿಯಾಗಿ ಇರುತ್ತಾರೆ ನಮ್ಮ ಮುಖ್ಯಮಂತ್ರಿಗಳು ಅಧಿಕಾರ ಬದಲಾವಣೆಯ ಸೂತ್ರ ಗೊತ್ತಿಲ್ಲ ವರಿಷ್ಠರ ತೀರ್ಮಾನಕ್ಕೆ ಬದ್ಧರಾಗಿದ್ದೇನೆ ಎಂದು ಶಾಸಕ ಸೇಠ್ ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಯಾವಾಗ ಬೇಕಾದರೂ ಕ್ರಾಂತಿ ಆಗಬಹುದು. ಜನರ ಆಸೆಗಳಿಗೆ ಸ್ಪಂದಿಸುವ ಸರ್ಕಾರ ಕೊಡಿ ಅಂತ ನಾವು ಹೇಳುತ್ತೇವೆ 5 ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ, ಸಿದ್ದರಾಮಯ್ಯ ಅವರಿಗೆ ದೇವರು ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ ಎಂದರು.