ಕ್ರಿಕೆಟಿಗ ಯಜುವೇಂದ್ರ ಚಹಾಲ್, ಧನಶ್ರೀ ದಂಪತಿಯ ದಾಂಪತ್ಯ ಜೀವನದಲ್ಲಿ ಬಿರುಕು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಟೀಂ ಇಂಡಿಯಾ ಕ್ರಿಕೆಟಿಗ ಯಜುವೇಂದ್ರ ಚಹಾಲ್ ಮತ್ತು ಪತ್ನಿ ಧನಶ್ರೀ (ನಟಿ) ನಡುವೆ ಮನಸ್ತಾಪವಾಗಿದೆಯಾ ಎನ್ನುವ ಅನುಮಾನದ ಗುಸುಗುಸು ಸಾಮಾಜಿಕ ಮಾಧ್ಯಮದಲ್ಲಿ ಕೇಳಿಬರುತ್ತಿದೆ.

ಧನಶ್ರೀ ಸೋಷಿಯಲ್ ಮೀಡಿಯಾದಲ್ಲಿ ಬಹಳ ಸಕ್ರಿಯರಾಗಿದ್ದು, ಪ್ರತಿದಿನ ಏನಾದರೂ ಒಂದನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. 5 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್​ಗಳನ್ನು ಹೊಂದಿರುವ ಧನಶ್ರೀ, ಇದೀಗ ತಮ್ಮ ಇನ್​ಸ್ಟಾಗ್ರಾಮ್​ ಬಯೋದಲ್ಲಿ ತಮ್ಮ ಹೆಸರಿನ ಹಿಂದಿದ್ದ ಪತಿ ಚಹಾಲ್ ಅವರ ಹೆಸರನ್ನು ತೆಗೆದುಹಾಕಿದ್ದಾರೆ ಈ ಮೂಲಕ ಅನುಮಾನಕ್ಕೆ ಇದಕ್ಕೆ ಪುಷ್ಟಿ ನೀಡಿದಂತಾಗಿದೆ.

ಧನಶ್ರೀ ನಂತರ ಸಾಮಾಜಿಕ ಮಾಧ್ಯಮದಲ್ಲಿ ಚಹಲ್ ಅವರ ಪೋಸ್ಟ್ ಕೂಡ ಸಂಚಲನವನ್ನು ಸೃಷ್ಟಿಸಿದೆ. ಚಹಾಲ್ ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ ಪೋಸ್ಟ್ ಅನ್ನು ಹಾಕಿದ್ದರು. ಅದರಲ್ಲಿ ಅವರು ಹೊಸ ಜೀವನ ಪ್ರಾರಂಭವಾಗುತ್ತಿದೆ ಎಂದು ಬರೆದಿದ್ದಾರೆ.

ಇವರಿಬ್ಬರ ಈ ವರ್ತನೆಯಿಂದ, ದಂಪತಿ ನಡುವೆ ಏನೋ ಸಮಸ್ಯೆ ಇದೆ ಎಂಬ ಗುಸುಗುಸು ಹುಟ್ಟಿಕೊಂಡಿದೆ. ಅದಾಗ್ಯೂ ಸಾಮಾಜಿಕ ಮಾಧ್ಯಮದಲ್ಲಿ ಇವರಿಬ್ಬರ ಚಟುವಟಿಕೆಗಳಿಂದ ಏನನ್ನೂ ಸ್ಪಷ್ಟಪಡಿಸಲಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!