ಉರುಳಿದ ಶಾಲಾ ಬಸ್:‌ ಓರ್ವ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಧ್ಯಪ್ರದೇಶದ ರಹತ್‌ಗಢದಲ್ಲಿ ಶಾಲಾ ಬಸ್ ಅಪಘಾತಕ್ಕೀಡಾಗಿದ್ದು, ಓರ್ವ ಶಾಲಾ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ ಶಾಲಾ ಬಸ್ ನಲ್ಲಿ 40 ವಿದ್ಯಾರ್ಥಿಗಳು ಮನೆಯಿಂದ ಹೊರಟಿದ್ದಾರೆ. ಆದರೆ, ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.

ಪರಿಣಾಮ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದ ಇತರ 37 ಮಕ್ಕಳು ಸುರಕ್ಷಿತವಾಗಿದ್ದಾರೆ. ಈ ಬಸ್ ಅಪಘಾತ ಹೇಗೆ ಸಂಭವಿಸಿತು ಎಂಬ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಶಾಲಾ ಬಸ್ ಪಲ್ಟಿಯಾದ ವಿಷಯ ತಿಳಿದ ವಿದ್ಯಾರ್ಥಿಗಳ ಪೋಷಕರು ಆತಂಕಗೊಂಡು, ತಕ್ಷಣ ಸ್ಥಳಕ್ಕೆ ಓಡೋಡಿ ಬಂದರು.  ಬಸ್ ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!