ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾಕುಂಭ ಮೇಳದಲ್ಲ ಮಾಘಿ ಪೂರ್ಣಿಮೆ ನಿಮಿತ್ತ ಬುಧವಾರ ಪುಣ್ಯ ಸ್ನಾನ ನಡೆಯುತ್ತಿದ್ದು, ಬೆಳಿಗ್ಗೆ 6 ಗಂಟೆಯವರೆಗೆ ತ್ರಿವೇಣಿ ಸಂಗಮದಲ್ಲಿ 73 ಲಕ್ಷಕ್ಕೂ ಹೆಚ್ಚು ಜನರು ಪುಣ್ಯ ಸ್ನಾನ ಮಾಡಿದ್ದಾರೆ.
ಬೆಳಗಿನ ಜಾವದಿಂದಲೇ ಪುಣ್ಯ ಸ್ನಾನ ಆರಂಭವಾಗಿದ್ದು, ತ್ರಿವೇಣಿ ಸಂಗಮದಲ್ಲಿ ಭಕ್ತ ಸಾಗರವೇ ಹರಿದು ಬರುತ್ತಿದೆ. ಈ ನಡುವೆ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಖನೌದಿಂದಲ ಅವಲೋಕನ ನಡೆಯುತ್ತಿದ್ದಾರೆ.
ಮುಖ್ಯಮಂತ್ರಿ ಆದಿತ್ಯನಾಥ್ ಅವರು ಲಖನೌದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿರುವ ವಾರ್ ರೂಮ್‌ನಲ್ಲಿ ಬೆಳಿಗ್ಗೆ 4 ಗಂಟೆಯಿಂದ ಮಾಘಿ ಪೂರ್ಣಿಮಾ ಸ್ನಾನವನ್ನು ವೀಕ್ಷಣೆ ಮಾಡುತ್ತಿದ್ದಾರೆ.
ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್, ಪ್ರಧಾನ ಕಾರ್ಯದರ್ಶಿ (ಗೃಹ) ಸಂಜಯ್ ಪ್ರಸಾದ್ ಮತ್ತು ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳು ಕೂಡ ವಾರ್ ರೂಮ್‌ನಲ್ಲಿ ಮುಖ್ಯಮಂತ್ರಿಗಳಿಗ ಸಾಥ್ ನೀಡಿದ್ದಾರೆ.
ಭಕ್ತರ ಸಂಚಾರ ಸುಗಮವಾಗಿ ನಡೆಯುತ್ತಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಹಿಂದಿನ ವಸಂತ ಪಂಚಮಿಯ ‘ಸ್ನಾನ’ದ ಸಮಯದಲ್ಲಿಯೂ ಸೂಕ್ತ ವ್ಯವಸ್ಥೆಗಳನ್ನು ಮಾಡಿದ್ದೆವು. ಈ ಬಾರಿ ವ್ಯವಸ್ಥೆಗಳನ್ನು ಮತ್ತಷ್ಟು ಹೆಚ್ಚಿಸಲಾಗಿದೆ ಎಂದು ಎಸ್‌ಎಸ್‌ಪಿ ರಾಜೇಶ್ ದ್ವಿವೇದಿ ಅವರು ಹೇಳಿದ್ದಾರೆ.