March 29, 2026
Sunday, March 29, 2026
spot_img

ಟ್ರಂಪ್ ವಿರುದ್ಧ ಬೀದಿಗಿಳಿದ ಜನಸಾಗರ: ನಮಗೆ ಈ ಆಡಳಿತ ಬೇಡೆವೇ ಬೇಡ ಎಂದ ದೊಡ್ಡಣ್ಣನ ಪ್ರಜೆಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದಲ್ಲಿ ರಾಜಕೀಯ ಉದ್ವಿಗ್ನತೆ ತೀವ್ರಗೊಂಡಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಜನರ ಅಸಮಾಧಾನ ದೊಡ್ಡ ಮಟ್ಟದ ಪ್ರತಿಭಟನೆಯ ರೂಪದಲ್ಲಿ ಹೊರಹೊಮ್ಮಿದೆ. ‘ನೋ ಕಿಂಗ್ಸ್’ ಚಳವಳಿಯ ಮೂಲಕ ದೇಶದ ವಿವಿಧ ಭಾಗಗಳಲ್ಲಿ ಲಕ್ಷಾಂತರ ಮಂದಿ ಸೇರಿ ಸರ್ಕಾರದ ನೀತಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ವಲಸೆ ನೀತಿ, ಆಡಳಿತ ಶೈಲಿ ಮತ್ತು ಯುದ್ಧ ತೀರ್ಮಾನಗಳ ಬಗ್ಗೆ ಪ್ರಶ್ನೆ ಎತ್ತಲಾಗಿದೆ. ಈ ಚಳವಳಿ ಕಳೆದ ಒಂದು ವರ್ಷದಲ್ಲಿ ಮೂರನೇ ಬಾರಿ ದೊಡ್ಡ ಪ್ರಮಾಣದಲ್ಲಿ ನಡೆದಿರುವುದು ಗಮನಾರ್ಹ.

ಇದನ್ನೂ ಓದಿ:

ಮಾಹಿತಿಯ ಪ್ರಕಾರ, 50 ರಾಜ್ಯಗಳಲ್ಲಿನ 3,000ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದಾರೆ. ನ್ಯೂಯಾರ್ಕ್, ಲಾಸ್ ಏಂಜಲೀಸ್, ವಾಷಿಂಗ್ಟನ್ ಸೇರಿದಂತೆ ಪ್ರಮುಖ ನಗರಗಳಲ್ಲಿ ದೊಡ್ಡ ಮಟ್ಟದ ರ‍್ಯಾಲಿಗಳು ನಡೆದಿವೆ.

ಪ್ರತಿಭಟನೆಗಳಲ್ಲಿ ಭಾಗಿಯಾದವರು ಬ್ಯಾನರ್‌ಗಳು ಮತ್ತು ಘೋಷಣೆಗಳ ಮೂಲಕ ಅಸಮಾಧಾನ ಹೊರಹಾಕಿದರು. ಕೆಲವರು ಅಮೆರಿಕದ ಧ್ವಜವನ್ನು ತಲೆಕೆಳಗಾಗಿ ಹಿಡಿದು ತಮ್ಮ ವಿರೋಧ ವ್ಯಕ್ತಪಡಿಸಿದರು. ಇರಾನ್ ಸಂಬಂಧಿತ ಯುದ್ಧ ಪರಿಸ್ಥಿತಿ ಈ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !