ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿಯ ಶರಣಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಅಪಘಾತ ಸಂಭವಿಸಿದೆ. ತೇರು ಎಳೆಯುವ ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿ ಹೋಮ್ ಗಾರ್ಡ್ ಸಿಬ್ಬಂದಿ ಮೃತಪಟ್ಟಿದ್ದಾರೆ.
28 ವರ್ಷದ ರಾಮು ಸಿದ್ದಪ್ಪತೇರು ಎಳೆಯುವ ವೇಳೆ ಉಂಟಾದ ನೂಕು ನುಗ್ಗಲಿನಲ್ಲಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಸಿಬ್ಬಂದಿ ಅಶೋಕ್ ರೆಡ್ಡಿ ಎನ್ನುವವರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರಗಿಯ ಆರ್ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.