ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಪ್ರತಿಕಾರದ ದಾಳಿಯಿಂದ ಈಗಾಗಲೇ ದಿವಾಳಿಯತ್ತ ಸಾಗುತ್ತಿರುವ ಪಾಕಿಸ್ತಾನಕ್ಕೆ ಇದೀಗ ಇಂಧನ ಕೊರತೆ ಎದುರಾಗಿದೆ. ರಾಜಧಾನಿ ಇಸ್ಲಾಮಾಬಾದ್ ಆಡಳಿತ ಮುಂದಿನ 48 ಗಂಟೆಗಳ ಕಾಲ ಎಲ್ಲಾ ಪೆಟ್ರೋಲ್ ಪಂಪ್‌ಗಳನ್ನು ಸಂಪೂರ್ಣವಾಗಿ ಬಂದ್ ಮಾಡುವಂತೆ ಆದೇಶ ಹೊರಡಿಸಿದೆ.
ಎಲ್ಲಾ ಪೆಟ್ರೋಲ್ ಪಂಪ್‌ಗಳನ್ನು ಕೂಡಲೇ ಮುಚ್ಚಬೇಕೆಂದು ಕಟ್ಟಾಜ್ಞೆ ಮಾಡಿದೆ. ಇದರಿಂದ 48 ಗಂಟೆ ವರೆಗೆ ಇಸ್ಲಾಮಾಬಾದ್‌ನಲ್ಲಿ ಖಾಸಗಿ ವಾಹನಗಳು, ಸಾರ್ವಜನಿಕ ಸಾರಿಗೆ ಹಾಗೂ ವಾಣಿಜ್ಯ ವಾಹನಗಳಿಗೆ ಇಂಧನ ಲಭ್ಯವಾಗದೇ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದೆ. ಜೊತೆಗೆ ಈ ಬೆಳವಣಿಗೆಯಿಂದ ಪಾಕ್ ಸರ್ಕಾರಕ್ಕೆ ಮತ್ತಷ್ಟು ನಷ್ಟ ಎದುರಾಗೋದು ಖಂಡಿತ.