ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ತಾಳಿ ಕಟ್ಟಿದ ಹದಿನೈದೇ ನಿಮಿಷದಲ್ಲಿ ವರ ಮೃತಪಟ್ಟಿರುವ ಘಟನೆ ನಡೆದಿದೆ.
ಜಮಖಂಡಿಯ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ವೇದಿಕೆಯ ಮೇಲೆ ಹೃದಯಾಘಾತವಾಗಿ ವರ ಕುಸಿದುಬಿದ್ದಿದ್ದಾನೆ. ಇದರಿಂದ ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಯುವಕ ಅಂತಿಮ ವಿದಾಯ ಹೇಳಿದ್ದಾನೆ.
ಜಮಖಂಡಿ ತಾಲೂಕಿನ ಕುಂಬಾರ ಹಳ್ಳ ಗ್ರಾಮದ ನಿವಾಸಿ ಪ್ರವೀಣ ಕುರ್ನೆ (25) ಮೃತ ದುರ್ದೈವಿ.
ಇಂದು ಪೂಜಾ ಎಂಬ ವಧುವಿನ ಜತೆ ಪ್ರವೀಣ್ ಕುರ್ನೆ ವಿವಾಹ ನಿಗದಿಯಾಗಿತ್ತು. ಆದರೆ ತಾಳಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ವರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಇದರಿಂದ ವಿವಾಹ ಜೀವನದ ಬಗ್ಗೆ ನೂರಾರು ಕನಸುಗಳನ್ನು ಕಟ್ಟಿಕೊಂಡು ಬಂದ ವಧುವಿಗೆ ಬರ ಸಿಡಿಲು ಬಡಿದಂತಾಗಿದೆ. ಮದುವೆಗೆ ಬಂದ ಸಂಬಂಧಿಕರು ಕಣ್ಣೀರಿಟ್ಟಿದ್ದಾರೆ.