ಹೊಸದಿಗಂತ ವರದಿ ಕಲಬುರಗಿ:
ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತ ಆರ್.ಪಿ.ಜಾಧವ್ ಅವರ ಮನೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುವ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಲೋಕಾಯುಕ್ತ ಎಸ್ಪಿ ಆಗಿರುವ ಬಿ.ಕೆ.ಉಮೇಶ್ ಅವರ ನೇತೃತ್ವದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಪಾಲಿಕೆಯ ಉಪ ಆಯುಕ್ತ ಆರ್.ಪಿ.ಜಾಧವ್ ಅವರ ನಗರದ ಉದಯ ನಗರದಲ್ಲಿನ ಮನೆಯ ಮೇಲೆ ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಅಧಿಕಾರಿಗಳಿಂದ ಮನೆಯಲ್ಲಿ ತಪಾಸಣೆ ಕಾರ್ಯ ಮುಂದುವರಿದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.