ಜೆಡಿಎಸ್‌ಗೆ ಮೊತ್ತೊಂದು ಆಘಾತ: ‘ತೆನೆ’ ಬಿಟ್ಟು ಬಿಜೆಪಿಯತ್ತ ಹೊರಟ ಬಸವರಾಜ ಹೊರಟ್ಟಿ!!

ಹೊಸದಿಗಂತ ಡಿಜಿಟಲ್ ಡೆಸ್ಕ್

ರಾಜ್ಯ ಜೆಡಿಎಸ್‌ಗೆ ಮತ್ತೊಂದು ಆಘಾತಕಾರಿ ಸುದ್ದಿ ಸಿಕ್ಕಿದೆ.
ಶೀಘ್ರವೇ ‘ತೆನೆ ಹೊತ್ತ ಮಹಿಳೆ’ಯನ್ನು ತೊರೆದು, ಬಿಜೆಪಿ ಸೇರ್ಪಡೆಯಾಗುವುದಾಗಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಘೋಷಣೆ ಮಾಡಿದ್ದಾರೆ. ಈ ಮೂಲಕ  ‘ಹೊರಟ್ಟಿ ಬಿಜೆಪಿ ಸೇರುತ್ತಾರಂತೆ…’ ವದಂತಿಗಳಿಗೆ ತೆರಬಿದ್ದಿದೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ನಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ಬಿಜೆಪಿ ನಾಯಕರು ಹೇಳಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಅವರು ನನ್ನೊಂದಿಗೆ ಮಾತುಕತೆ ನಡೆಸಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾದ ನಂತರ ಬಿಜೆಪಿ ಸೇರ್ಪಡೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು.
ಬಿಜೆಪಿ ಸೇರ್ಪಡೆಗೆ ಬಗ್ಗೆ ಯಾರು ವಿರೋಧ ಮಾಡುತ್ತಿದ್ದಾರೆ ಎಂಬುದು ನನಗೆ ಬೇಕಾಗಿಲ್ಲ. ಶನಿವಾರ ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಅಲ್ಲದೇ, ಬಿಜೆಪಿಯಿಂದ ಸ್ಪರ್ಧೆಗೆ ಹೆಚ್. ಡಿ. ಕುಮಾರಸ್ವಾಮಿ ಅವರೂ ಕೂಡಾ ಮುಕ್ತವಾಗಿ ಒಪ್ಪಿದ್ದಾರೆ. ಬಿಜೆಪಿ ಸೇರ್ಪಡೆಗೆ ಕರ್ನಾಟಕದ ಎಲ್ಲಾ ನಾಯಕರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!