Friday, September 30, 2022

Latest Posts

ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಸಿದ್ಧತೆ ಬೆನ್ನಲ್ಲೇ ಗಾಂಧಿ ಕುಟುಂಬಕ್ಕೆ ಶಾಕ್

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಸಕಲ ಸಿದ್ಧತೆ ಒಂದೆಡೆ ನಡೆಯುತ್ತಿದ್ದರೆ, ಇತ್ತ ಪಕ್ಷದೊಳಗಿನ ವೈಮನಸ್ಸು ಹೆಚ್ಚುತ್ತಿದ್ದು, ಒಬ್ಬರ ಹಿಂದೆ ಒಬ್ಬರು ರಾಜೀನಾಮೆ ನೀಡುತ್ತಿದ್ದಾರೆ.

ಈಗಾಗಲೇ ಗುಲಾಂ ನಬಿ ಆಜಾದ್ ಸೇರಿ 60ಕ್ಕೂ ಹೆಚ್ಚು ಕಾಂಗ್ರೆಸ್ ಹಿರಿಯ ನಾಯಕರು ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ಇದೀಗ ಪಂಜಾಬ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಬಲ್ವೀರ್ ರಾಣಿ ಸೋಧಿ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿಗೆ ರವಾನಿಸಿದ್ದಾರೆ.

ಈಗಾಗಲೇ ಹಲವು ನಾಯಕರು ಪಂಜಾಬ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಇದೀಗ ಮಹಿಳಾ ಘಟಕ ಅಧ್ಯಕ್ಷೆ ರಾಜೀನಾಮೆ ಪಂಜಾಬ್ ಕಾಂಗ್ರೆಸನ್ನು ದುರ್ಬಲಗೊಳಿಸಿದೆ.

ಬಲ್ವೀರ್ ರಾಣಿ ಸೋಧಿ ರಾಜೀನಾಮೆಗೆ ಪಕ್ಷದೊಳಗಿನ ಅಸಮಾಧಾನ, ಬಣ ರಾಜಕೀಯ ಕಾರಣವಲ್ಲ. ವೈಯುಕ್ತಿಕ ಕಾರಣದಿಂದ ರಾಜೀನಾಮೆ ನೀಡುವುದಾಗಿ ಬಲ್ವೀರ್ ರಾಣಿ ಸೋಧಿ ಹೇಳಿದ್ದಾರೆ.

ನನ್ನ ಕೌಟುಂಬಿಕ ಪರಿಸ್ಥಿತಿಗಳಿಂದ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಅನಿವಾರ್ಯ ಕಾರಣಗಳಿಂದ ನನಗೆ ಮಹಿಳಾ ಘಟಕ ಅಧ್ಯಕ್ಷೆಯಾಗಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ಹುದ್ದೆಯಿಂದ ಬಿಡುಗಡೆ ಮಾಡಿ ಎಂದು ರಾಜೀನಾಮೆ ಪತ್ರದಲ್ಲಿ ಬಲ್ವೀರ್ ರಾಣಿ ಸೋಧಿ ಬರೆದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!