July 29, 2026
Wednesday, July 29, 2026
spot_img

ಬೆಂಗಳೂರಿನ ಖಾಲಿ ನಿವೇಶನಗಳ ಮಾಲೀಕರಿಗೆ ಶಾಕ್‌, ಸೈಟ್‌ ಗಲೀಜಾಗಿದ್ರೆ ಒಂದು ಲಕ್ಷದವರೆಗೆ ದಂಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರನ್ನು ಸ್ವಚ್ಛನಗರಿ ಮಾಡೋದಕ್ಕಾಗಿ ಆಗಸ್ಟ್-2026 ಮಾಹೆಯಲ್ಲಿ “ತ್ಯಾಜ್ಯದಿಂದ ಸ್ವಾತಂತ್ರ” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಆಡಳಿತ ಹೊಂದಿರುವ ಎಲ್ಲಾ ನಗರ ಪಾಲಿಕೆಗಳು ಹಾಗೂ ಇತರೇ ಸಂಸ್ಥೆಗಳ ವತಿಯಿಂದ ನಗರದ ರಸ್ತೆಗಳಲ್ಲಿ ಕಪ್ಪುಚುಕ್ಕೆಗಳು, ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯ, ಮರದ ಕೊಂಬೆಗಳು, ವಿದ್ಯುತ್ ಕಂಬಗಳು, ಪೈಪುಗಳನ್ನು ಸಾಮೂಹಿಕವಾಗಿ ತೆರವುಗೊಳಿಸಲು ಉದ್ದೇಶಿಸಲಾಗಿದೆ.

ಇದೇ ರೀತಿ ಬೆಂಗಳೂರಿನಲ್ಲಿರುವ ಖಾಲಿ ಸೈಟ್‌ಗಳನ್ನು ಶುಚಿಯಾಗಿ ಇಟ್ಟುಕೊಳ್ಳಿ ಎಂದು ಮಾಲೀಕರಿಗೆ ಸೂಚನೆ ನೀಡಲಾಗಿದೆ. ಘನತ್ಯಾಜ್ಯ ನಿರ್ವಹಣಾ ಉಪವಿಧಿಗಳು-2020ರ ಉಪವಿಧಿ 18(1)(ಬಿ) ರನ್ವಯ ಖಾಲಿ ನಿವೇಶನಗಳನ್ನು ಸ್ವಚ್ಛ ಹಾಗೂ ನೈರ್ಮಲ್ಯಯುತ ಸ್ಥಿತಿಯಲ್ಲಿ ನಿರ್ವಹಿಸುವುದು ಮಾಲೀಕರ ಕಡ್ಡಾಯ ಜವಾಬ್ದಾರಿಯಾಗಿದೆ.

ಏನೆಲ್ಲಾ ರೂಲ್ಸ್‌ ಫಾಲೋ ಮಾಡ್ಬೇಕು?
ಖಾಲಿ ಸೈಟ್‌ನಲ್ಲಿ ಇರುವ ಕಸವನ್ನು ಆಗಸ್ಟ್‌ 15ರೊಳಗೆ ಕ್ಲೀನ್‌ ಮಾಡಲೇಬೇಕು.

ಒಂದು ವೇಳೆ ಸ್ವಚ್ಛಗೊಳಿಸದಿದ್ದಲ್ಲಿ, ನಗರಪಾಲಿಕೆಯ ವತಿಯಿಂದ ತ್ಯಾಜ್ಯ/ಡೆಬಿಸ್ ಅನ್ನು ತೆರವುಗೊಳಿಸಿ, ತಗುಲುವ ವೆಚ್ಚವನ್ನು ನಿವೇಶನದ ವಿಸ್ತೀರ್ಣ ಹಾಗೂ ತೆರವುಗೊಳಿಸಿದ ತ್ಯಾಜ್ಯದ ಪ್ರಮಾಣಕ್ಕೆ ಅನುಗುಣವಾಗಿ ಘನತ್ಯಾಜ್ಯ ನಿರ್ವಹಣಾ ಉಪವಿಧಿಗಳು-2020ರ ಉಪವಿಧಿ 18(1)(ಡಿ) (ii) ಹಾಗೂ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 285(2) ರನ್ವಯ ಆಸ್ತಿ ತೆರಿಗೆಯೊಂದಿಗೆ ವಸೂಲಿ ಮಾಡಲಾಗುವುದು.

ತೆರಿಗೆ ಬಾಕಿಯನ್ನು ಕರ್ನಾಟಕ ಭೂಕಂದಾಯ ಕಾಯ್ದೆ 1964 ರ ಅನುಸಾರ ವಸೂಲಾತಿ ಕ್ರಮ ಜರುಗಿಸಲಾಗುವುದು. ನಂತರದ ಪ್ರಕರಣಗಳಲ್ಲಿ ಉಪವಿಧಿ 18(1)(ಡಿ) (iii) ರನ್ವಯ ಮೊದಲ ಉಲ್ಲಂಘನೆಗೆ ರೂ.25,000/- ಹಾಗೂ ನಂತರದ ಉಲ್ಲಂಘನೆಗಳಿಗೆ ರೂ.50,000/- ರಿಂದ ರೂ.1,00,000/- ವರೆಗೆ ದಂಡ ವಿಧಿಸಲಾಗುವುದು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !