ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ಪತ್ತೆ ಹಚ್ಚಿ ಜಪ್ತಿ ಮಾಡಲಾಗಿದೆ. 214 ಲೀಟರ್ ಮದ್ಯ ಹಾಗೂ 117 ಲೀಟರ್ ಬಿಯರ್ ಬಾಟಲಿಗಳನ್ನು ಕರವೇ ಪೊಲೀಸರು ಜಪ್ತಿ ಮಾಡಿದ್ದಾರೆ.
ಕಲಬುರಗಿ ಜೇವರ್ಗಿ ತಾಲೂಕಿನ ಹಿಪ್ಪರಗಾ ಎಸ್.ಎನ್ ಗ್ರಾಮದ ಬಳಿ ಪೊಲೀಸರು ವಾಹನವನ್ನು ತಪಾಸಣೆ ನಡೆಸುತ್ತಿದ್ದ ವೇಳೆ 1.54 ಲಕ್ಷ ಮೌಲ್ಯದ ಮದ್ಯ ಹಾಗೂ ಕಾರನ್ನು ಜಪ್ತಿ ಮಾಡಿದ್ದಾರೆ.
ಮಾರುತಿ ಸುಜುಕಿ ಇಕೋ ಕಾರಿನಲ್ಲಿ ಮದ್ಯ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಿಂದ ಹಿಪ್ಪರಗಾ ಗ್ರಾಮದ ಕಡೆಗೆ ಕಾರು ಹೋಗುತ್ತಿತ್ತು, ಸಿಪಿಐ ಕವಿತಾ ನೇತೃತ್ವದ ಅಬಕಾರಿ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಈ ಮೂಲಕ ಅಕ್ರಮ ಸರಬರಾಜು ದಂಧೆ ನಡೆಯುತ್ತಿದ್ದು, ಅಬಕಾರಿ ಇಲಾಖೆ ಚುರುಕುಗೊಂಡಿದೆ.