ಉಡುಪಿ ಜಿಲ್ಲೆಯಲ್ಲೊಂದು ಶಾಕಿಂಗ್ ಘಟನೆ: ಪೊಲೀಸ್ ವಶದಲ್ಲಿದ್ದ ಆರೋಪಿ ಠಾಣೆಯಲ್ಲಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳೆ ಮತ್ತು ಮಕ್ಕಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿಯೊಬ್ಬರು ಠಾಣೆಯಲ್ಲೇ ಸಾವಿಗೀಡಾಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಕೇರಳದ ಕೊಲ್ಲಂ ಮೂಲದ ಬಿಜು ಮೋಹನ್ ಮೃತಪಟ್ಟವರು.

ಮಹಿಳೆ ಮತ್ತು ಮಕ್ಕಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ. ಠಾಣೆಗೆ ಕರೆಸಿ ಪ್ರಾಥಮಿಕ ತನಿಖೆ ನಡೆಸಿದ ಬ್ರಹ್ಮಾವರ ಪೊಲೀಸರು, ಲಾಕಪ್‌ನಲ್ಲಿ ಇರಿಸಿದ್ದರು. ಮುಂಜಾನೆ ಕುಸಿದು ಬಿದ್ದ ಸ್ಥಿತಿಯಲ್ಲಿದ್ದ ಆತನನ್ನು ಪೊಲೀಸರೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಚಿಕಿತ್ಸೆ ನೀಡುವ ಮೊದಲೇ ಆತ ಕೊನೆಯುಸಿರೆಳೆದಿದ್ದಾನೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೊಚ್ಚಿನ್ ಶಿಪ್ ವಾರ್ಡಿನಲ್ಲಿ ಕೂಲಿ ಕೆಲಸಕ್ಕೆ ಬಂದಿದ್ದ. ವಿಪರೀತ ಕುಡಿತದ ಚಟ ಇರುವ ಬಿಜು, ಕಳೆದ ಸಂಜೆ ಚೇರ್ಕಾಡಿ ಗ್ರಾಮದಲ್ಲಿ ಮನೆಗೆ ಹೋಗಿ ಮಹಿಳೆ ಮತ್ತು ಆಕೆಯ ಮಕ್ಕಳನ್ನು ಚುಡಾಯಿಸಿದ್ದ. ಸ್ಥಳೀಯರು ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಗೆ ಫೋನ್ ಮಾಡಿ ಮಾಹಿತಿ ನೀಡಿದ್ದರು. ತಕ್ಷಣ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದರು. ಶನಿವಾರ ರಾತ್ರಿ ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪೊಲೀಸರು ಈ ಬಗ್ಗೆ ರಾತ್ರಿಯೇ ಪ್ರಾಥಮಿಕ ತನಿಖೆಯನ್ನು ಮಾಡಿ ಮಾಹಿತಿ ದಾಖಲು ಮಾಡಿಕೊಂಡಿದ್ದರು. ಕಳೆದ ರಾತ್ರಿ ಲಾಕಪ್ನಲ್ಲೇ ಇರಿಸಿದ್ದರು. ಕಳೆದ ರಾತ್ರಿ 3:45 ಸುಮಾರಿಗೆ ಕರ್ತವ್ಯದಲ್ಲಿದ್ದ ಸಿಬ್ಬಂದಿ ಆರೋಪಿ ಕುಸಿದು ಬಿದ್ದಿರೋದನ್ನು ಗಮನಿಸಿದ್ದಾರೆ. ಎಸ್‌ಐ ಗೆ ಮಾಹಿತಿ ನೀಡಿ, ತಕ್ಷಣ ಅಂಬುಲೆನ್ಸ್ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಬಿಜು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪೊಲೀಸರು ಆತನ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!