October 10, 2026
Saturday, October 10, 2026
spot_img

ಹೈದರಾಬಾದ್ ನಲ್ಲಿ ಸಿಕ್ಸರ್ ಗಳ ಸುರಿಮಳೆ: ಅಭಿಷೇಕ್ ಶರ್ಮಾ ಸ್ಫೋಟಕ ಶತಕ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಬೌಂಡರಿ, ಸಿಕ್ಸರ್ ಗಳ ಸುರಿಮಳೆಯಾಗಿದೆ. ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಸೋತು ಬ್ಯಾಟಿಂಗ್ ಇಳಿದ ಸನ್‌ರೈಸರ್ಸ್ ಹೈದರಾಬಾದ್ ಪರ ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್ ನಡೆಸಿದರು.

ನಿಧಾನಗತಿಯ ಬ್ಯಾಟಿಂಗ್ ಶುರು ಮಾಡಿದ ಅಭಿಷೇಕ್ 25 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಬಳಿಕ ಆಕ್ರಮಣಕಾರಿ ಬ್ಯಾಟಿಂಗ್ ನಡೆಸಲು ಮುಂದಾದ ಶರ್ಮಾ 47 ಎಸೆತಗಳಲ್ಲಿ 7 ಬೌಂಡರಿ ಮತ್ತು 9 ಸಿಕ್ಸರ್‌ ನೆರವಿನಿಂದ ಶತಕ ಸಿಡಿಸಿ ಸಂಭ್ರಮಿಸಿದರು. ಈ ಮೂಲಕ ಐಪಿಎಲ್ ಇದು ಅವರ ಎರಡನೇ ಶತಕವಾಗಿದೆ.

ಟಿ20 ಕ್ರಿಕೆಟ್​​ನಲ್ಲಿ ವಿರಾಟ್ ಜೊತೆ ಅಭಿಷೇಕ್ ಶರ್ಮಾ ಅತಿ ಹೆಚ್ಚು ಶತಕಗಳನ್ನು ಗಳಿಸಿದ ದಾಖಲೆಯನ್ನು ಹಂಚಿಕೊಂಡಿದ್ದು, ಇಬ್ಬರೂ ತಲಾ 9 ಶತಕಗಳನ್ನು ಬಾರಿಸಿದ್ದಾರೆ.

Must Read