‘ಕೈ’ ಪಾಳಯದಲ್ಲಿ ನೆಮ್ಮದಿಯ ನಿಟ್ಟುಸಿರು: ರೆಡ್ಡಿ ರಾಜೀನಾಮೆ ವಾಪಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ರಾಮಲಿಂಗಾರೆಡ್ಡಿ ರಾಜೀನಾಮೆ ಬೆಳವಣಿಗೆಗೆ ಕೊನೆಗೂ ತೆರೆ ಬಿದ್ದಿದೆ. ಪಕ್ಷದ ಹಿರಿಯ ನಾಯಕರ ಜೊತೆ ನಡೆದ ಸತತ ಮಾತುಕತೆಗಳ ಬಳಿಕ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದು, ಸರ್ಕಾರ ಮತ್ತು ಪಕ್ಷದೊಂದಿಗೆ ಮುಂದುವರಿಯಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ ಹೇಳಿದ್ದಾರೆ. ಸಮಾಧಾನದ ಸೂತ್ರ ಯಶಸ್ವಿ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಹಿನ್ನೆಲೆ ಉಂಟಾಗಿದ್ದ ಅಸಮಾಧಾನ ಕಾಂಗ್ರೆಸ್ ನಾಯಕರಿಗೆ ತಲೆನೋವಾಗಿ ಪರಿಣಮಿಸಿತ್ತು. … Continue reading ‘ಕೈ’ ಪಾಳಯದಲ್ಲಿ ನೆಮ್ಮದಿಯ ನಿಟ್ಟುಸಿರು: ರೆಡ್ಡಿ ರಾಜೀನಾಮೆ ವಾಪಸ್