Friday, March 24, 2023

Latest Posts

ಪತ್ನಿ ಶೀಲ ಶಂಕಿಸಿದ ಪಾಪಿ ಪತಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

ಹೊಸದಿಗಂತ ವರದಿ ಕಲಬುರಗಿ:

ಕಲಬುರಗಿಯ ಅಂಬಿಕಾ ಕಾಲೋನಿಯಲ್ಲಿ ಪತ್ನಿಯ ಶೀಲವನ್ನು ಶಂಕಿಸಿದ ಪತಿ ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಂದಿದ್ದಾನೆ.

ಫರಿದಾ ಬೇಗಂರನ್ನು 13 ವರ್ಷದ ಹಿಂದೆ ಮದುವೆಯಾಗಿದ್ದ ಎಜಾಜ್ ಅಹ್ಮದ್ ಆಕೆ ಮೇಲೆ ಅನುಮಾನ ಪಡುತ್ತಿದ್ದ, ಸಾಲದಕ್ಕೆ ಆಕೆ ವರದಕ್ಷಿಣೆ ಕಿರುಕುಳ ಸುಳ್ಳು ಆರೋಪ ಮಾಡಿದ್ದಾಳೆ ಎಂದು ಮಲಗಿದ್ದಾಗ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಂದಿದ್ದಾನೆ.

ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದು, ಅನುಮಾನದ ಪತಿ ಶಾಲೆಗೂ ಹೋಗದಂತೆ ಹೇಳುತ್ತಿದ್ದ ಎನ್ನಲಾಗಿದೆ. ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!