ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಆಹಾರ ವಸ್ತು ಸಂಗ್ರಹಿಟ್ಟುಕೊಳ್ಳುವಂತೆ ಪಾಕಿಸ್ತಾನ ಗಡಿ ಭಾಗದ ಜನತೆಗೆ ಸೂಚನೆ ನೀಡಲಾಗಿದೆ. ನೀಲಂ ಕಣಿವೆಗೆ ತೆರಳದಂತೆ ಪ್ರವಾಸಿಗರಿಗೆ ನಿರ್ದೇಶನ ನೀಡಲಾಗಿದೆ. ಎರಡು ತಿಂಗಳ ಕಾಲ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲು ಪಿಒಕೆ ನಾಗರಿಕರಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ
ಪಾಕಿಸ್ತಾನ ಮತ್ತು ಭಾರತದ ನಡುವೆ ಪಹಲ್ಗಾಮ್ ದಾಳಿಯ ನಂತರ ಉದ್ವಿಗ್ನತೆ ಹೆಚ್ಚಾಗಿದೆ. ಪಾಕಿಸ್ತಾನದ ಪ್ರಧಾನಿ ಈ ದಾಳಿಯ ಬಗ್ಗೆ ಪಾರದರ್ಶನಕ ತನಿಖೆಗೆ ಸಿದ್ಧ ಎಂದು ಹೇಳಿಕೆ ನೀಡಿದ್ದರು. ಆದರೆ, ಇದೀಗ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಉಗ್ರರ ಜೊತೆಗೆ ಹಲವು ಕಾಲದಿಂದಲೂ ಪಾಕಿಸ್ತಾನಕ್ಕೆ ಸಂಬಂಧವಿದೆ ಎಂಬುದು ರಹಸ್ಯವಾಗೇನೂ ಉಳಿದಿಲ್ಲ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತವು ಸೂಕ್ತ ಉತ್ತರ ನೀಡಬೇಕೆಂದು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಕರೆ ನೀಡಿದ್ದಾರೆ. ಹಾಗೇ, ಈ ದಾಳಿಗೆ ಕಾರಣರಾದ ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಬಂಧಿಸುವಲ್ಲಿ ಭಾರತದೊಂದಿಗೆ ಸಹಕರಿಸುವಂತೆ ಜೆ.ಡಿ. ವ್ಯಾನ್ಸ್ ಪಾಕಿಸ್ತಾನವನ್ನು ಒತ್ತಾಯಿಸಿದ್ದಾರೆ.