Wednesday, July 6, 2022

Latest Posts

ಯೋಗ ಮಾಡುವ ವೇಳೆ ಜಾರಿ ಬಿದ್ದ ಕೇಂದ್ರ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್: ಆಸ್ಪತ್ರೆಗೆ ದಾಖಲು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………

ಹೊಸದಿಗಂತ ವರದಿ, ಮಂಗಳೂರು:

ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಮನೆಯಲ್ಲಿ ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡ ಹಿನ್ನೆಲೆಯಲ್ಲಿ ನಗರದ ಯೇನೆಪೊಯ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಾನುವಾರ ಬೆಳಗ್ಗೆ ಯೋಗ ಮಾಡುವ ವೇಳೆ ಆಸ್ಕರ್ ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲವೆಂದು ನಿರ್ಲಕ್ಷಿಸಿದ್ದರು. ಭಾನುವಾರ ಸಂಜೆ ಆರೋಗ್ಯ ತಪಾಸಣೆಗೆಂದು ಅವರು ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭ ವೈದ್ಯರು ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟಾಗಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಕರ್ ಫೆರ್ನಾಂಡಿಸ್ ಅವರಿಗೆ ಕೂಡಲೇ ಶಸ್ತ್ರಚಿಕಿತ್ಸೆ ಮಾಡುವ ಅಗತ್ಯವಿದೆ ಎಂಬುದಾಗಿ ವೈದ್ಯರು ಹೇಳಿದ್ದಾರೆ. ಸದ್ಯ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss