ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವಕಪ್ ನಲ್ಲಿ ನ್ಯೂಜಿಲ್ಯಾಂಡ್ ಅಫ್ಘಾನಿಸ್ತಾನ ವಿರುದ್ಧ 149 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.
ಸ್ಪಿನ್ ಟ್ರ್ಯಾಕ್ನಲ್ಲಿ ಅಮೋಘ ಬ್ಯಾಟಿಂಗ್ ಮತ್ತು ಬೌಲಿಂಗ್ ಪ್ರದರ್ಶನ ತೋರಿದ ನ್ಯೂಜಿಲ್ಯಾಂಡ್ ಗೆದ್ದುಕೊಂಡಿದ್ದು, ಈ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಈ ಮೊದಲು ಅಗ್ರಸ್ಥಾನದಲ್ಲಿದ್ದ ಭಾರತ ದ್ವಿತೀಯ ಸ್ಥಾನಕ್ಕೆ ಕುಸಿದಿದೆ.
ಚೆನ್ನೈಯ ಎಂ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ನ್ಯೂಜಿಲ್ಯಾಂಡ್ ನಿಗದಿತ 50 ಓವರ್ಗಳಲ್ಲಿ 6 ವಿಕೆಟ್ಗೆ 288 ರನ್ ಪೇರಿಸಿತು.
ಅಫ್ಘಾನಿಸ್ತಾನ ನಾಟಕೀಯ ಕುಸಿತ ಕಂಡು 34.4 ಓವರ್ಗಳಲ್ಲಿ 139 ರನ್ಗೆ ಸರ್ವಪತನ ಕಂಡಿತು.