ಛತ್ತೀಸ್‌ಗಢದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಯೋಧ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಮಧ್ಯಪ್ರದೇಶ ವಿಶೇಷ ಸಶಸ್ತ್ರ ಪಡೆಯ ಯೋಧನೊಬ್ಬ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಗರಿಯಾಬಂದ್ ಮಹಾಸಮುಂಡ್ ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಈ ವೇಳೆ ಪಿಪಾರ್ಚೇಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಡೆದದಾರ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬೆಳಿಗ್ಗೆ 9.30 ರ ಸುಮಾರಿಗೆ ಘಟನೆ ನಡೆದಿದೆ .

ಶಾಲೆಯ ಕೊಠಡಿಯೊಂದರಲ್ಲಿದ್ದ ಹೆಡ್ ಕಾನ್‌ಸ್ಟೆಬಲ್ ಜಿಯಾಲಾಲ್ ಪವಾರ್ ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮೀಸಲು ತಂಡದಲ್ಲಿದ್ದರು.

ಪವಾರ್ ಅವರು ಎಂಪಿ ವಿಶೇಷ ಸಶಸ್ತ್ರ ಪಡೆಯ ಬೆಟಾಲಿಯನ್ ನಂ.34 ಗೆ ಸೇರಿದವರು. ಮಾಹಿತಿ ತಿಳಿದ ಕೂಡಲೇ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದೆ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!