May 2, 2026
Saturday, May 2, 2026
spot_img

ಕಾಂಗ್ರೆಸ್‌ಗೆ ಗಂಟಲಲ್ಲಿ ಕಡುಬು: ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಸಮರ್ಥ್ ಶಾಮನೂರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮತ್ತೆ ಚುನಾವಣಾ ಕಣ ರಂಗೇರುತ್ತಿದ್ದು, ಏ.9 ರಂದು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆ ನಡೆಯಲಿದೆ.
ಈ ನಡುವೆ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಮಗ ಸಮರ್ಥ್ ಶಾಮನೂರು ಇಂದು ಕಾಂಗ್ರೆಸ್‌ನಿಂದ ದಿಢೀರ್ ನಾಮಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ.

ಈ ಕ್ಷೇತ್ರಕ್ಕೆ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕಾಂಗ್ರೆಸ್ ಮಾತ್ರ ಇನ್ನೂ ತನ್ನ ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲದಲ್ಲಿದೆ. ಇವುಗಳ ನಡುವೆಯೇ ಈ ಅಚ್ಚರಿಯ ಬೆಳವಣಿಗೆ ನಡೆದಿದೆ.



ಕಾಂಗ್ರೆಸ್ ಹೈಕಮಾಂಡ್ ಇನ್ನೂ ತನ್ನ ಅಭ್ಯರ್ಥಿ ಯಾರೆಂದು ಘೋಷಿಸಲಿಲ್ಲ. ಯಾವುದೇ ಪಕ್ಷವು ಬಿ ಫಾರ್ಮ್ ನೀಡಿಲ್ಲ. ಆದರೆ ಸಮರ್ಥ್ ಅವರು ತಾಯಿ ಡಾ. ಪ್ರಭಾ ಮಲ್ಲಿಕಾರ್ಜುನ್ ಜೊತೆಗೆ ಆಗಮನಿಸಿ ನಾಮಪತ್ರ ಸಲ್ಲಿಸಿದ್ದಾರೆ. ಇದೀಗ ಟಿಕೆಟ್ ಘೋಷಣೆ ಆಗದೆ ನಾಮಪತ್ರ ಸಲ್ಲಿಸಿರುವುದು ಕಾಂಗ್ರೆಸ್ ಪಾಳಯದಲ್ಲಿ ಹೊಸ ಬಿಕ್ಕಟ್ಟಿಗೆ ಕಾರಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !