ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀಪ ಬೆಳಗುವ ವೇಳೆ ಸಿಎಂ ಸಿದ್ದರಾಮಯ್ಯ ಅವರ ಬಟ್ಟೆಗೆ ಬೆಂಕಿಯ ಬಿಸಿ ತಾಗಿದ ಘಟನೆ ನಡೆದಿದೆ.
ಇಂದು ವಿಧಾನಸೌಧದ ಭವ್ಯ ಮೆಟ್ಟಿಲಲ್ಲಿ 200ನೇ ಕಿತ್ತೂರು ವಿಜಯೋತ್ಸವ ಸ್ಮರಣಾರ್ಥ ಕಾರ್ಯಕ್ರಮವನ್ನು ಸಿಎಂ ಉದ್ಘಾಟಿಸಿದರು. ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡಿದ ಬಳಿಕ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಜಾಗ ಬಿಡಲು ಸಿಎಂ ಮುಂದಾದರು.
ಈ ವೇಳೆ ಸಿಎಂ ದೀಪದ ಹತ್ತಿರ ಬಂದಾಗ ಎಡಕೈಗೆ ಬೆಂಕಿಯ ಕಿಡಿ ತಾಗಿದೆ. ಆಕಸ್ಮಿಕವಾಗಿ ತಾಕಿದ ಕಿಡಿಯನ್ನು ಕೂಡಲೇ ಭದ್ರತಾ ಸಿಬ್ಬಂದಿ ಆರಿಸಿದ್ದಾರೆ.