ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಹೆದ್ದಾರಿಯಲ್ಲಿ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ದಂಪತಿ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ.
ಈ ದೃಶ್ಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆ ಆ ಪ್ರದೇಶದಲ್ಲಿದ್ದ ಕಣ್ಗಾವಲು ಕ್ಯಾಮೆರಾದಲ್ಲಿ ದಾಖಲಾಗಿದೆ. ಪುಣೆಯ ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಗುರುವಾರ ದಂಪತಿಯ ಬೈಕ್‌ಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ನೆಲಕ್ಕೆ ಬೀಳುತ್ತಿರುವುದನ್ನು ಘಟನೆಯ ದೃಶ್ಯಾವಳಿಗಳು ತೋರಿಸಿವೆ.
ದಂಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದರು.