ವೇಗವಾಗಿ ಬಂದು ಕಸದ ಲಾರಿಗೆ ಡಿಕ್ಕಿ ಹೊಡೆದ ಕಾರ್‌, ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಿನ್ನೆ ರಾತ್ರಿ 10:30ರ ವೇಳೆ ಬಾಲಗತ್ತ್ ಜಂಕ್ಷನ್​ ಬಳಿ ವೇಗವಾಗಿ ಬಂದ ಐವರು ಪ್ರಯಾಣಿಕರಿದ್ದ ಕಾರು ಕಸದ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಓರ್ವ ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಓಡಿಶಾ ಮೂಲದ ಸಾಗರ್ ( 23) ಮೃತರು.  ವೈಟ್​ಫೀಲ್ಡ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!