ಹೊಸದಿಗಂತ ವರದಿ:
ವೇಗವಾಗಿ ಚಲಿಸುತ್ತಿದ್ದ ಕಾರು ಮಹಿಳೆಯೋರ್ವಳಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಚಳಗೇರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-04 ರಲ್ಲಿ ಬುಧವಾರದಂದು ನಡೆದಿದೆ.
ಮೃತ ಮಹಿಳೆಯನ್ನು ಚಳಗೇರಿ ಗ್ರಾಮದ ದುರ್ಗವ್ವ ಬಸಪ್ಪ ಹೊನ್ನಕ್ಕಳವರ(52) ಎಂದು ಗುರುತಿಸಲಾಗಿದೆ.
ಮಹಿಳೆ ರಸ್ತೆ ದಾಟುವಾಗ ಕಾರು ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುವ ಸಂದರ್ಭದಲ್ಲಿ ಅತೀ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದಿದೆ. ಮಹಿಳೆ ಸ್ಥಳದಲ್ಲಿಯೇ ಬಿದ್ದು ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.