ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಂಗ್ ರೂಟ್ನಲ್ಲಿ ವೇಗವಾಗಿ ಬಂದ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ರಸ್ತೆಯ ಮಿನಿಲ್ಯಾಂಡ್ ಶಾಲೆ ಬಳಿ ನಡೆದಿದೆ.
ಮೃತರನ್ನು ರಫೀಕ್ ನಗರದ ನಿವಾಸಿ ಡ್ಯಾನಿಶ್ (40), ಅವರ ಇಬ್ಬರು ಮಕ್ಕಳು ಹಾಗೂ ಸಹೋದರನ ಮಕ್ಕಳು ಎಂದು ಗುರುತಿಸಲಾಗಿದೆ.
ಟ್ರಕ್ ಡಿಕ್ಕಿಯಾದ ರಭಸಕ್ಕೆ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಡಿಕ್ಕಿ ಹೊಡೆದ ಟ್ರಕ್‌ನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.