ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸೌದಿ ಅರೇಬಿಯಾದ ಜೆಡ್ಡಾದಿಂದ ಹೊರಟಿದ್ದ ಸ್ಪೈಸ್ ಜೆಟ್ ವಿಮಾನವು ಹೈಡ್ರಾಲಿಕ್ ವೈಫಲ್ಯದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಪೈಸ್ ಜೆಟ್ ವಿಮಾನ ಎಸ್ಜಿ -306 ಕೋಝಿಕ್ಕೋಡ್ಗೆ ಹಾರುತ್ತಿದ್ದಾಗ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯದಿಂದಾಗಿ ಕೊಚ್ಚಿಯಲ್ಲಿ ಇಳಿದಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದರು.
ಇಂದು ಸಂಜೆ 6.27ಕ್ಕೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನ ಘೋಷಿಸಲಾಗಿದೆ. ಸಂಜೆ 7.19 ಕ್ಕೆ ವಿಮಾನ ಸುರಕ್ಷಿತವಾಗಿ ಇಳಿಯಿತು, ನಂತ್ರ ತುರ್ತು ಸ್ಥಿತಿಯನ್ನ ಹಿಂತೆಗೆದುಕೊಳ್ಳಲಾಯಿತು.