ದಿಲ್ಲಿಯಿಂದ ದುಬೈಗೆ ಹೊರಟಿದ್ದ SpiceJet​ ವಿಮಾನ ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ದೆಹಲಿಯಿಂದ ದುಬೈಗೆ ಹೊರಟಿದ್ದ ಸ್ಪೈಸ್‌ಜೆಟ್ ಎಸ್​ಜಿ-11 ವಿಮಾನ ತಾಂತ್ರಿಕ ದೋಷದಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಸ್ಪೈಸ್‌ಜೆಟ್ ಎಸ್​ಜಿ 11 ವಿಮಾನ ಇಂದು ಬೆಳಗ್ಗೆ ದೆಹಲಿಯಿಂದ ದುಬೈ ತೆರಳುತ್ತಿತ್ತು. ಈ ವೇಳೆ ಇಂಡಿಕೇಟರ್​ ಲೈಟಿಂಗ್​ನಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನವನ್ನು ಕರಾಚಿಗೆ ಮರಳಿಸಿ ತುರ್ತು ಲ್ಯಾಂಡಿಂಗ್​ ಮಾಡಲಾಗಿದೆ. ಎಲ್ಲ ಪ್ರಯಾಣಿಕರು ಸುರಕ್ಷಿವಾಗಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.
ವಿಮಾನದಲ್ಲಿ ಯಾವುದೇ ಅಪಾಯ ಇರಲಿಲ್ಲ. ಆದಾಗ್ಯೂ ಪ್ರಯಾಣಿಕರ ಹಿತದೃಷ್ಟಿಯಂದ ವಿಮಾನವನ್ನು ಕರಾಚಿಯಲ್ಲಿ ಭೂಸ್ಪರ್ಶ ಮಾಡಲಾಯಿತು. ಪ್ರಯಾಣಿಕರಿಗೆ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಅವರನ್ನು ದುಬೈಗೆ ಕರೆದೊಯ್ಯಲು ಬದಲಿ ವಿಮಾನದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!