ಚುನಾವಣಾ ಕರ್ತವ್ಯಕ್ಕೆ ಹೊರಡುತ್ತಿದ್ದ ಸಿಬ್ಬಂದಿಗೆ ಬಸ್‌ ಹತ್ತುವಾಗ ಹೃದಯಾಘಾತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದ 14 ಲೋಕಸಭೆ ಕ್ಷೇತ್ರಗಳಿಗೆ ಮೇ 07ರಂದು ನಡೆಯಲಿರುವ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನದ ಸಲುವಾಗಿ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕರೊಬ್ಬರಿಗೆ ಬಸ್‌ ಹತ್ತುವ ವೇಳೆ ಹೃದಯಾಘಾತವಾಗಿದೆ.

ಸರ್ಕಾರಿ ಶಾಲಾ ಶಿಕ್ಷಕರಾದ ಗೋವಿಂದಪ್ಪ ಸಿದ್ದಾಪುರ ಬಸ್​ ಹತ್ತುವ ವೇಳೆ ದಿಢೀರ್ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆಯ ಮುಧೋಳ ನಗರದಲ್ಲಿ ನಡೆದಿದೆ.

ಬಸ್ ನಿಲ್ದಾಣದ ಗೇಟ್ ಬಳಿ ಗೋವಿಂದಪ್ಪ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಇವರು   ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಚುನಾವಣೆಯ ಹಿನ್ನಲೆ ಅವರನ್ನು ಜಮಖಂಡಿ ತಾಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಚುನಾವಣಾ ಕರ್ತವ್ಯ ಮಾಡುವಂತೆ ಸೂಚನೆ ನೀಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!